ಹೃದಯ ಸಮುದ್ರ

ಹೃದಯ ಸಮುದ್ರ
-ದ. ರಾ. ಬೇಂದ್ರೆ

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ
ನೀಲ ತೀರಾ,
ಮಿಂಚುಬಳಗ ತೆರೆತೆರೆಗಳಾಗಿ
ಅಲೆಯುವದು ಪುಟ್ಟಪೂರಾ,
ಅದು ನಮ್ಮ ಊರು, ಇದು ನಿಮ್ಮ ಊರು,
ತಂತಮ್ಮ ಊರೊ ಧೀರಾ,
ಅದರೊಳಗೆ ನಾವು, ನಮ್ಮೊಳಗೆ ತಾವು ಅ
ದು ಇಲ್ಲವಣ್ಣ ದೂರಾ.

ಕರೆ ಬಂದಿತಣ್ಣ, ತೆರೆ ಬಂದಿತಣ್ಣ, ನೆರೆ
ಬಂದಿತಣ್ಣ ಬಳಿಗೆ,
ಹರಿತsದ ಭಾವ, ಬೆರಿತsದ ಜೀವ
ಅದರೊಳಗೆ ಒಳಗೆ ಒಳಗೆ.
ಇದೆ ಸಮಯವಣ್ಣ ಇದೆ ಸಮಯ ತಮ್ಮ
ನಮ್‌ನಿಮ್ಮ ಆತ್ಮಗಳಿಗೆ.
ಅಂಬಿಗನು ಬಂದ, ನಂಬಿಗನು ಬಂದ
ಬಂದsದ ದಿವ್ಯಗಳಿಗೆ.

ಇದು ಉಪ್ಪು ನೀರ ಕಡಲಲ್ಲೊ; ನಮ್ಮ
ಒಡಲಲ್ಲೆ ಇದರ ನೆಲೆಯು.
ಕಂಡವರಿಗಲ್ಲೊ ಕಂಡವರಿಗಷ್ಟೆ ತಿಳಿದsದ
ಇದರ ಬೆಲೆಯು.
ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲೆ ಮಾತ್ರ ಒಡೆಯುವದು
ಇದರ ಸೆಲೆಯು,
ಕಣ್ಣರಳಿದಾಗ ಕಣ್ ಹೊರಳಿದಾಗ
ಹೊಳೆಯುವದು ಇದರ ಕಳೆಯು.

ಬಂದವರ ಬಳಿಗೆ ಬಂದsದ ಮತ್ತು
ನಿಂದವರ ನೆರೆಗು
ಬಂದsದೋ ಬಂದsದ,
ನವಮನುವು ಬಂದ ಹೊಸ ದ್ವೀಪಗಳಿಗೆ
ಹೊರಟಾನ ಬನ್ನಿ
ಅಂದsದೋ ಅಂದsದ.

ನಿಮ್ಮ ಹರೀಶ್ ನಾಗರಾಜ್

ನಿಮ್ಮ ಅನಿಸಿಕೆ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: