ಹೀಗೊಂದು ಕೊಲೆ

ನೆತ್ತರು ಚಿಮ್ಮಿರಲಿಲ್ಲ..
ಚೀತ್ಕಾರದ ಸದ್ದೂ ಕೇಳಿಸಿರಲಿಲ್ಲ
ಸುತ್ತಮುತ್ತಲಿನ ಜನಕೆ
ಶವವೂ ಕಾಣಿಸುತ್ತಾ ಇಲ್ಲ
ಆದರೂ ಕೊಲೆಯೊಂದು ನಡೆದಿತ್ತು
ಕೊಲೆಯಾದ ರೀತಿಯೂ ವಿಚಿತ್ರ..
ಯಾವುದೇ ಹರಿತವಾದ
ಆಯುಧಗಳ ಬಳಕೆಯಾಗಿಲ್ಲ,
ಘೋರ ವಿಷಪ್ರಯೋಗವೂ ಆಗಿರಲಿಲ್ಲ
ಆದರೂ ಕೊಲೆಯೊಂದು ನಡೆದಿತ್ತು.
ಕೇಳಿದವರಾರು ನಂಬಲಾರರು
ಈ ರೀತಿ ಆಗುವುದುಂಟೇ.. ಎಂದಾರು..
ಯಾಕೆಂದರೆ ಕೊಲೆಯಾಗಿದ್ದು ನನ್ನ ಆತ್ಮ..
ನಾನು ನನ್ನವಳೆಂದುಕೊಂಡಿದ್ದಾಕೆ ಕೊಲೆಗಾರ್ತಿ
ಪ್ರೀತಿಯ ಬಲೆಯಲ್ಲಿ ಬೀಳಿಸಿ
ಮೋಸವೆನುವ ಮಾರಕಾಯುಧದಿಂದ
ಕರುಣೆ ತೋರದೆಯೇ ಕೊಂದು ಬಿಟ್ಟಳು..
ಈಗ ನನ್ನ ಆತ್ಮಕ್ಕೆ ಚೈತನ್ಯವಿಲ್ಲ
ಅದರ ಮನೆಯಂತಿದ್ದ ನನ್ನ ದೇಹವೇ
ಈಗ ಆ ಸತ್ತ ಆತ್ಮದ ಗೋರಿ..
ಹೀಗೊಂದು ಸಾವಿಗೆ ಅಳುವವರೂ ಯಾರಿಲ್ಲ
ಯಾಕೆಂದರೆ ಈ ಸಾವಿನರಿವು ನನ್ನವರಿಗಿಲ್ಲ..
ಹೇಳಹೊರಟೆನಂದರೂ ಕಾಡುವುವು
ಅವರ ಹಲವು ಪ್ರಶ್ನೆಗಳು.
ಕೊಲೆಯಾದುದೆಲ್ಲಿ..ಸತ್ತಿರುವ ದೇಹವೆಲ್ಲಿ..
ಸತ್ತದ್ದು ಹಾಗಿರಲಿ, ಸೋತು ಹೋದೇನು
ಜನರಿಗೀ ಸತ್ಯವ ಬಿಡಿಸಿ ತಿಳಿ ಹೇಳುವಲ್ಲಿ..
ಹಾಗಾಗಿ ಸುಮ್ಮನಿದ್ದೇನೆ..
ಸತ್ತ ಆತ್ಮದ ಸಾವಿಗೆ ನಾನೊಬ್ಬನೇ
ಅಳುತ್ತಾ, ಜಗದ ದೃಷ್ಟಿಯಲ್ಲಿ ಬದುಕಿದ್ದೇನೆ.—ಕೆ.ಗುರುಪ್ರಸಾದ್

Advertisements

6 responses

  1. ವಾಹ್, ತುಂಬ ಚೆನ್ನಾಗಿದೆ. ಪಾಪ ಅನಿಸುತಿದೆ ಈ ನಿಮ್ಮ ಕಷ್ಟ ಕೇಳಿ… ಹೌದು ಆ ಕೊಲೆಗರ್ತಿ ಯಾರು?

  2. ಹ ಹ ಬರಿಯ ಒಂದು ಕಲ್ಪನೆ ಅಷ್ಟೇ… ಸದ್ಯಕ್ಕೆ ನನ್ನ ಆತ್ಮ ಜೀವಂತವಾಗೇ ಇದೆ…

    1. ಹ ಹ ಹ ಹೌದು ಈ ಕಲ್ಪನೆ ತುಂಬಾ ಚೆನ್ನಾಗಿದೆ ಅಂತ ಹೇಳಿದ್ದು ನಾನು, ಸಧ್ಯಕ್ಕೆ ನೀವು ಹೀಗೆ ಬರಿತಿರಿ, ನಾವು ಓದ್ತಿರ್ತಿವಿ…..

  3. with ur permission i wanna share it in face book…

  4. ಧಾರಾಳವಾಗಿ ಹಂಚಿಕೊಳ್ಳಿ ಆದರೆ ಲೇಖಕರ ಹೆಸರನ್ನು ಮರೆಯಬೇಡಿ

ನಿಮ್ಮ ಅನಿಸಿಕೆ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: