Category Archives: ಗಾದೆ ಮಾತು

ಗಾದೆ ಮಾತು

ಕೆಲವು ಗಾದೆ ಮಾತುಗಳು

  1. ಹಾಸಿಗೆ ಇದ್ದಷ್ತು ಕಾಲು ಚಾಚು
  2. ಅ೦ಗೈ ಹುಣ್ಣಿಗೆ ಕನ್ನಡಿ ಬೇಕೆ
  3. ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ
  4. ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ
  5. ಮನೇಲಿ ಇಲಿ, ಬೀದೀಲಿ ಹುಲಿ
  6. ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ
  7. ಕಾರ್ಯಾವಾಸಿ ಕತ್ತೆಕಾಲು ಹಿಡಿ
  8. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು
  9. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು
  10. ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ
  11. ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ
  12. ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ
  13. ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ
  14. ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ
  15. ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ
  16. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ
  17. ಬೇಲೀನೆ ಎದ್ದು ಹೊಲ ಮೇಯ್ದ೦ತೆ
  18. ಅ೦ಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ
  19. ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ
  20. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
  21. ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ
  22. ದೇವರು ವರ ಕೊಟ್ರು ಪೂಜಾರಿ ಕೊಡ
  23. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
  24. ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು
  25. ಎತ್ತು ಈಯಿತು ಅ೦ದರೆ ಕೊಟ್ಟಿಗೆಗೆ ಕಟ್ಟು ಎ೦ದರ೦ತೆ
  26. ಗ೦ಡ ಹೆ೦ಡಿರ ಜಗಳ ಉ೦ಡು ಮಲಗೋ ತನಕ
  27. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ
  28. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
  29. ಗೆದ್ದೆತ್ತಿನ ಬಾಲ ಹಿಡಿದ ಹಾಗೆ
  30. ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ೦ತೆ
  31. ಭ೦ಗಿದೇವರಿಗೆ ಹೆ೦ಡುಗುಡುಕ ಪೂಜಾರಿ
  32. ಕಾಸಿಗೆ ತಕ್ಕ ಕಜ್ಜಾಯ
  33. ಸಾವಿರ ಸುಳ್ಳು ಹೇಳಿ ಒ೦ದು ಮದುವೆ ಮಾಡು
  34. ಕೂಸು ಹುಟ್ಟುವ ಮು೦ಚೆ ಕುಲಾವಿ
  35. ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಲಗೆ ತೂರು
  36. ಇಬ್ಬರ ಜಗಳ ಮೂರನೆಯವನಿಗೆ ಲಾಭ
  37. ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ
  38. ವೇದ ಸುಳ್ಳಾದರೂ ಗಾದೆ ಸುಳ್ಳಾಗದು
  39. ಹಿತ್ತಲ ಗಿಡ ಮದ್ದಲ್ಲ
  40. ಮಾಡಿದ್ದುಣ್ಣೋ ಮಹರಾಯ
  41. ಕೈ ಕೆಸರಾದರೆ ಬಾಯಿ ಮೊಸರು
  42. ದುಡ್ಡೇ ದೊಡ್ಡಪ್ಪ ವಿದ್ಯೆ ಅದರಪ್ಪ
  43. ಮಾತು ಬೆಳ್ಳಿ ಮೌನ ಬಂಗಾರ
  44. ಆಪತ್ತಿಗಾದವನೇ ನೆಂಟ
  45. ಹುಟ್ಟುತ್ತ ಹುಟ್ಟುತ್ತ ಅಣ್ಣ ತಮ್ಮಂದಿರು ಬೆಳೆಯುತ್ತ ಬೆಳೆಯುತ್ತ ದಾಯಾದಿಗಳು
  46. ಎಲ್ಲರ ಮನೆಯ ದೋಸೆಯೂ ತೂತೇ
  47. ದುಡಿಮೆಯೇ ದುಡ್ಡಿನ ತಾಯಿ
  48. ಬೆಂಕಿ ಇಲ್ಲದೇ ಹೊಗೆ ಆಡಲ್ಲ
  49. ಕೂಸು ಹುಟ್ಟೊಕು ಮುಂಚೆ ಕುಲಾವಿ ಹೊಲಿಸಿದರಂತೆ
  50. ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ಬಂದುವಿಲ್ಲ
  51. ಯಾರದೊ ದುಡ್ಡು ಯಲ್ಲಮ್ಮನಾ ಜಾತ್ರೆ
  52. ಊಟಕ್ಕಿಲ್ಲದ ಉಪ್ಪಿನ ಕಾಯಿ ನಂತರ ಏತಕ್ಕೆ
  53. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿಯಂತೆ
  54. ಬಡವರ ಮನೆ ಊಟ ಚೆನ್ನ ಶ್ರೀಮಂತರ ಮನೆ ನೋಟ ಚೆನ್ನ
  55. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
  56. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
Advertisements